ಕೋಲ್ಕೊತಾದಲ್ಲಿ ವಿದ್ಯಾರ್ಥಿ ಕೊಲೆಗೆ ಸಿಎಸ್‌ಐ ಖಂಡನೆ

Doctors
Published on

ಬೆಂಗಳೂರು: ಕೋಲ್ಕೊತಾದ ಆರ್.ಜಿ. ಕರ್ ಸರಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಭಾಂಗಣದಲ್ಲಿಯೇ ತರಬೇತಿನಿರತ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಕೊಲೆ ಮಾಡಿರುವುದನ್ನು ಕಾರ್ಡಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾ (ಸಿಎಸ್‌ಐ) ದಕ್ಷಿಣ ವಲಯವೂ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಸಿಎಸ್‌ಐ ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಬಿ.ಎಚ್. ನಟೇಶ್ , ದುಷ್ಕರ್ಮಿಗಳನ್ನು ಪತ್ತೆ ಹಚ್ಚಿನ ಅವರನ್ನು ಕಿಠಣ ಶಿಕ್ಷಣಗೆ ಗುರಿಪಡಿಸಬೇಕು. ಆಸ್ಪತ್ರೆಗಳಲ್ಲಿ ವೈದ್ಯರಿಗೆ ಭದ್ರತೆ, ಮಹಿಳಾ ವೈದ್ಯರಿಗೆ ಸುರಕ್ಷತೆ, ಕಣ್ಗಾವಲು ವ್ಯವಸ್ಥೆ ಕಲ್ಪಿಸಬೇಕು. ಹಗಲಿರುಳು ಎನ್ನದೆ ಸಮಾಜದ ಜನರ ಆರೋಗ್ಯಕ್ಕಾಗಿ ಕಾರ್ಯನಿರ್ವಹಿಸುವ ವೈದ್ಯರಿಗೆ ಕೆಲಸದ ಸ್ಥಳದಲ್ಲಿ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸುವುದರ ಜೊತೆಗೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net