ಸಿ.ಟಿ.ರವಿಗೆ ಅನ್ಯಾಯವಾಗಿದೆ; ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಸ್ಥಾನಕ್ಕೆ ಪ್ರಾಮಾಣಿಕ ಪ್ರಯತ್ನ: ಬಿಎಸ್‌ವೈ ಭರವಸೆ

b s yad (5)
Published on

ಚಿಕ್ಕಮಗಳೂರು: ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ. ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಸ್ಥಾನ ಸಿಗಲೇಬೇಕು. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಂದು ಭರವಸೆ ನೀಡಿದರು.

ಕಡೂರು ತಾಲೂಕು ಸಖರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಅವರಿಗೆ ಅವಕಾಶ ಸಿಗಲೇಬೇಕು ಎಂದರು.
ಎದೆ ಬಗೆದು ತೋರಿಸಲು ಆಗಲ್ಲ: ಮಾಜಿ ಸಚಿವ ಸಿ.ಟಿ.ರವಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರ ಹೋರಾಟದಿಂದ ಪ್ರೇರೇಪಿತನಾಗಿ ನಾನು ಬಿಜೆಪಿಗೆ ಬಂದಿದ್ದು. ಆದರೆ ನನ್ನ ಅವರ ಸಂಬಂಧದಲ್ಲಿ ಹುಳಿ ಹಿಂಡುವ ಕೆಲಸ ನಡೆಯಿತು. ನನ್ನ ನಿಷ್ಠೆಯನ್ನು ನಾನು ಎದೆ ಬಗೆದು ತೋರಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಎಂದೂ ಪಕ್ಷಕ್ಕೆ ದ್ರೋಹ ಮಾಡಲಿಲ್ಲ. ಯಡಿಯೂರಪ್ಪ ಅವರು ಅಧಿಕಾರ ನೀಡಿದಾಗ ರಾಜ್ಯದ ಜನ ಮೆಚ್ಚುವಂತೆ ಕೆಲಸ ಮಾಡಿ ತೋರಿಸಿದ್ದೇನೆ ಎಂದು ಯಡಿಯೂರಪ್ಪ ಅವರನ್ನು ಹಾಡಿಹೊಗಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net