ರಾತ್ರಿ ಆಕ್ಸಿಡೆಂಟ್​, ಬೆಳಗ್ಗೆ ಶವ ಪತ್ತೆ !

PH 02
Published on

ಚಿತ್ತಾಪುರ: ಸೇತುವೆಗೆ ಬೈಕ್​ ಡಿಕ್ಕಿ ಹೊಡೆದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ತಾಪುರ ಹೊರವಲಯದ ಕರದಾಳ ರಸ್ತೆಯ ಸೇತುವೆ ಬಳಿ ಸೋಮವಾರ ರಾತ್ರಿ ನಡೆದಿದೆ.

ಚಿತ್ತಾಪುರದ ಯುವಕ ಸೋಹೆಲ್ ಪರವೇಜ್ (೩೦) ಮೃತ ದುರ್ದೈವಿ. ಸೋಮವಾರ ರಾತ್ರಿ ಬುಲೆಟ್ ವಾಹನದ ಮೇಲೆ ಕರದಾಳ ಗ್ರಾಮಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ಹೇಳಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್​ ಆಗಿರಲಿಲ್ಲ. ಇದರಿಂದ ಕುಟುಂಬದವರು ಗಾಬರಿಗೊಂಡಿದ್ದರು.

ಮಂಗಳವಾರ ಬೆಳಗ್ಗೆ ವಾಹನ ಸವಾರರಿಗೆ ಸೇತುವೆ ಬಳಿ ಶವ ಹಾಗೂ ಬೈಕ್ ಕಾಣಿಸಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂಧನ ಮುಗಿಲು ಮುಟ್ಟಿತ್ತು.

ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net