ಕೋಮುವಾದ ಅಳಿಸಿ ಕೇಂದ್ರಿಯ ವಿವಿ ಉಳಿಸಿ ಹೋರಾಟ : ಸಿಯುಕೆ ಮುತ್ತಿಗೆ ಹಾಕಲು ಕಡಗಂಚಿಯಿಂದ ಮೆರವಣಿಗೆ ಆರಂಭ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದ ಅಳಿಸಿ ಕೇಂದ್ರೀಯ ವಿವಿ (ಸಿಯುಕೆ)ಉಳಿಸಿ ಘೋಷವಾಕ್ಯದೊಂದಿಗೆ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಜಾಥಾ ಹಾಗೂ ಸಿಯುಕೆ ಮುತ್ತಿಗೆ ಹಾಕಲು ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಿಂದ ಆರಂಭವಾಗಿದೆ.
IMG-20231011-WA0006
Published on

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದ ಅಳಿಸಿ ಕೇಂದ್ರೀಯ ವಿವಿ (ಸಿಯುಕೆ)ಉಳಿಸಿ ಘೋಷವಾಕ್ಯದೊಂದಿಗೆ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಜಾಥಾ ಹಾಗೂ ಸಿಯುಕೆ ಮುತ್ತಿಗೆ ಹಾಕಲು ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಿಂದ ಆರಂಭವಾಗಿದೆ.

ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿರುವ ಸಹಸ್ರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರೀಯ ವಿವಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಕೋಮುವಾದ ಅಳಿಸಿ, ಕೇಂದ್ರೀಯ ವಿವಿ ಉಳಿಸಿ ಹೋರಾಟ ಸಮಿತಿಯಿಂದ ಬೃಹತ್ ಹೋರಾಟ ಹಮ್ಮಿಕೊಂಡಿದ್ದು, ಸಹಸ್ರಾರು ಜನರು ಪಾಲ್ಗೊಂಡಿದ್ದಾರೆ.

ಬೃಹತ್ ಮೆರವಣಿಗೆಯೂ ಕಡಗಂಚಿಯಿಂದ ಮೂರು ಕಿ.ಮೀ.ದೂರದಲ್ಲಿರುವ ಕೇಂದ್ರೀಯ ವಿವಿವರೆಗೆ ಸಾಗಲಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ವಿವಿಗೆ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರವೇಶ ದ್ವಾರದ ಬಳಿಯ ಎಲ್ಲ ಅಂಗಡಿ, ಮುಂಗಟ್ಟು ಮುಚ್ಚಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ವಾಹನ, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net