ಉತ್ತಮ ಸಂಸ್ಕಾರ ರೂಢಿಸಿಕೊಳ್ಳಿ

 ಅರಕಲಗೂಡು ತಾಲೂಕು ರಾಮನಾಥಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎ. ಮಂಜು, ಕೃಷ್ಣೇಗೌಡ, ಸರ್ವಮಂಗಳಾ ಇತರರಿದ್ದರು.

Published on

ಅರಕಲಗೂಡು: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ರೂಢಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಕಿವಿಮಾತು ಹೇಳಿದರು.

ತಾಲೂಕಿನ ರಾಮನಾಥಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕ್ರೀಡೆ, ಸಾಂಸ್ಕೃತಿಕ, ಎನ್ನೆಸ್ಸೆಸ್ಸ್, ಸಹ ಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯೆಯಿಂದ ಮಾತ್ರ ಬದಲಾವಣೆ ಸಾಧ್ಯ. ಅಂತೆಯೇ ಪಿಯು ಶಿಕ್ಷಣ ಮಹತ್ವದ ಘಟ್ಟವಾಗಿದ್ದು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಲಿಕೆ ಕಡೆಗೆ ಆಸಕ್ತಿ ವಹಿಸಿ ಉತ್ತಮ ಅಂಕ ಗಳಿಸಿ ಭವಿಷ್ಯದ ಸಾಧನೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಮಹಿಳೆಯರು ಸಮಾಜದಲ್ಲಿ ಅನೇಕ ರೀತಿಯಲ್ಲಿ ಸಾಧನೆ ಮಾಡಿದ್ದಾರೆ. ಇದಕ್ಕಾಗಿ ಹೆಣ್ಣು ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರವೂ ಅತ್ಯಗತ್ಯ. ಈ ನಿಟ್ಟಿನಲ್ಲಿ ಓದಿನ ಹಂತದಲ್ಲೇ ಉತ್ತಮ ನಡೆ, ಸಂಸ್ಕಾರ, ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೃಷ್ಣೇಗೌಡ, ಸದಸ್ಯ ಭರತ್, ಸಿದ್ದಯ್ಯ, ಕುಮಾರ್, ಪ್ರಾಂಶುಪಾಲೆ ಸರ್ವಮಂಗಳಾ, ಉಪನ್ಯಾಸಕರು ಇದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net