

ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು. ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಓಪಿಎಸ್ ಜಾರಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಕಾಲಾವಕಾಶ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಆರ್ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂದ ಜಿಲ್ಲಾ ಟಕ ವತಿಯಿಂದ ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಒತ್ತಡಗಳಲ್ಲಿ ಕೆಲಸ ಮಾಡುವ ನೌಕರರು ನಿತ್ಯ ವ್ಯಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳಬೇಕು. ಎಲ್ಲರಿಗೂ ಉತ್ತಮ ಆರೋಗ್ಯ ಹೊಂದಲು ಒಳ್ಳೆ ಜೀವನ ಶೈಲಿ ಅಗತ್ಯ. ಆಹಾರ, ಓದು, ಸಂಗೀತ, ವಿಹಾರದಂತಹ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಶಾಸಕ ಎನ್. ಎಚ್. ಕೋನರಡ್ಡಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಿ ಲವಲವಿಕೆಯಿಂದ ದೈನಂದಿನ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಲು ಸಾಧ್ಯ ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕ್ರೀಡೆ, ಸಾಂಸತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡ ಕಳೆದುಹೋಗಿ, ಉತ್ತೇಜನ, ವಿಶ್ರಾಂತಿ ಸಿಗುತ್ತದೆ. ನೌಕರರು ಉತ್ತಮ ಆರೋಗ್ಯಕ್ಕಾಗಿ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ದೇವಿದಾಸ ಶಾಂತಿಕರ, ಮಲ್ಲಿಕಾರ್ಜುನ ಸೊಲಗಿ, ರಾಜಶೇಖರ ಬಾಣದ, ಗಿರೀಶ ಚೌಡಕಿ, ಲಕ್ಷ$್ಮಣ ರಜಪೂತ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳು, ಇತರರು ಇದ್ದರು.
ಜಿಲ್ಲಾಧ್ಯ ಎಸ್.ಎ್.ಸಿದ್ದನಗೌಡರ ಸ್ವಾಗತಿಸಿದರು. ರಮೇಶ ಲಿಂಗದಾಳ ನಿರೂಪಿಸಿದರು. ಮಂಜುನಾಥ ಯಡಳ್ಳಿ ವಂದಿಸಿದರು.