ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ

Cultivate sportsmanship
ಬಸವನಬಾಗೇವಾಡಿ ತಾಲೂಕಿನ ಇವಣಗಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ನರಸಲಗಿ ಗ್ರಾಮ ಪಂಚಾಯತಿ ಮಟ್ಟದ ಕ್ರೀಡಾಕೂಟವನ್ನು ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೊಡ, ಮಂಜುನಾಥ ಇಟಗಿ, ಶಿವಾನಂದ ಮಂಗಾನವರ ಇತರರಿದ್ದರು.
Published on

ಬಸವನಬಾಗೇವಾಡಿ: ಕ್ರೀಡೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಅದನ್ನು ಸಮನಾಗಿ ಸ್ವೀಕರಿಸಿ ವಿದ್ಯಾರ್ಥಿಗಳು ಆಸಕ್ತಿಯಿಂದ ಆಡಬೇಕು ಮತ್ತು ಶಾರೀರಿಕ ಸದೃಢತೆಗೆ ಆಟ-ಪಾಠಗಳು ಮಹತ್ವ ಎಂದು ಸಹಕಾರಿ ಮಹಾಮಂಡಳಿ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಮಂಗಳವಾರ ತಾಲೂಕಿನ ಇವಣಗಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ನರಸಲಗಿ ಗ್ರಾಮ ಪಂಚಾಯತಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆಯನ್ನು ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೊಡ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಪ್ರಾಥಮಿಕ ಹಂತದ ಕ್ರೀಡಾಕೂಟಗಳು ವರ್ಷಕ್ಕೊಮ್ಮೆ ನಡೆದರೂ ಪ್ರತಿನಿತ್ಯ ಪಾಠದ ಜೊತೆಗೆ ಮಕ್ಕಳಿಗೆ ಕ್ರೀಡಾ ಚಟುವಟಿಕೆಗೆ ಹೆಚ್ಚುನ ಒತ್ತು ನೀಡಬೇಕು. ಆ ಮಕ್ಕಳು ರಾಜ್ಯ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ಗುರುತಿಸಲು ಸಹಕಾರವಾಗುತ್ತದೆ ಎಂದು ಹೇಳಿದರು.

ಮಂಜುನಾಥ ಇಟಗಿ ಅಧ್ಯಕ್ಷತೆ ವಹಿಸಿದ್ದರು. ಶಿವಾನಂದ ಮಂಗಾನವರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕಲ್ಲು ಸೊನ್ನದ. ಸಂಗನಗೌಡ ಬಿರಾದಾರ, ಯಮನಪ್ಪ ಚಲವಾದಿ, ಬಿ.ವಿ. ಚಕ್ರಮನಿ ಹಲವರಿದ್ದರು.

ಎಸ್ ಎಸ್. ಇಂಗಳೇಶ್ವರ ಸ್ವಾಗತಿಸಿದರು. ಸಿದ್ದಣ್ಣ ಅವಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net