ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿರಿ

12 GJD 3
ಗಜೇಂದ್ರಗಡ ತಾಲೂಕಿನ ರಾಂಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಂಥಾಲಯದ ಪಿತಾಮಹ ಡಾ. ಎಸ್.ಆರ್. ರಂಗನಾಥ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆಯನ್ನು ತಾಪಂ ಇಒ ಡಾ.ಡಿ.ಮೋಹನ ಉದ್ಘಾಟಿಸಿದರು.
Published on

ಗಜೇಂದ್ರಗಡ: ಗ್ರಂಥಾಲಯದಿಂದ ವ್ಯಕ್ತಿತ್ವ ಬದಲಾವಣೆಯ ಸಾಧ್ಯತೆ ಇದೆ. ಪ್ರತಿಯೊಬ್ಬರೂ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ. ಮೋಹನ ಹೇಳಿದರು.

ತಾಲೂಕಿನ ರಾಂಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಮಟ್ಟದ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಲ್ಲಿಯೂ ಎಲ್ಲ ಮಾಹಿತಿ ಸಿಗಲಿದೆ. ಶಿಕ್ಷಕರು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕಿನಲ್ಲಿ ಅತಿ ಹೆಚ್ಚು ಗ್ರಂಥಾಲಯ ಪುಸ್ತಕಗಳನ್ನು ಓದಿ ಕಥೆ ಕವನ ಬರೆದಿರುವ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಪಂ ಅಧ್ಯಕ್ಷರಾದ ಹುಲಿಗೆವ್ವ ಸಣ್ಣಕ್ಕಿ, ಸದಸ್ಯರಾದ ಶಿವರಾಜ ಗೌಡ್ರ, ಭರಮಪ್ಪ ಹುಣಸಿಗಿಡ, ಪಿಡಿಒ ಎಸ್.ಬಿ. ಕಡಬಲಕಟ್ಟಿ, ಐಇಸಿ ಸಂಯೋಜಕರಾದ ಮಂಜುನಾಥ ಹಳ್ಳದ, ಕಾರ್ಯದರ್ಶಿ ಎಂ.ಎಂ. ಗೋಡೆಕಾರ, ಶರಣಗೌಡ ಗೌಡ್ರ, ಬಸವರಾಜ ಕಲಕೇರಿ, ಹುಸೇನಸಾಬ ಮ್ಯಾಗೇರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net