ಮನೆಯಂಗಳದಲ್ಲಿ ಗಾಂಜಾ ಕೃಷಿ, ಆರೋಪಿ ಬಂಧನ

Ganja
Published on


ಮೈಸೂರು: ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯೊಬ್ಬನನ್ನು ಬುಧವಾರ ಬಂಧಿಸಿರುವ ಅಂತರಸಂತೆ ಪೊಲೀಸರು ಆರೋಪಿಯಿಂದ 2 ಕೆ.ಜಿ. 250 ಗ್ರಾಂ ತೂಕದ ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.

ಎನ್.ಬೇಗೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net