

ಬ್ಯಾಡಗಿ: ಕೃಷಿ ಹೊಂಡದಲ್ಲಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೋಳೂರ ಕ್ಯಾಂಪ್ ಬಳಿ ಭಾನುವಾರ ನಡೆದಿದೆ.
ಗ್ರಾಮದ ತಿಪ್ಪೇಶ ತಾಯಪ್ಪ ಮುದ್ದಿನಗೇರಿ (45) ಮೃತ ವ್ಯಕ್ತಿ.
ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.