ಉತ್ತಮ ಫಲಿತಾಂಶ ಪಡೆದು ಕನಸು ನನಸಾಗಿಸಿ

23 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಅವಕಾಶಗಳು ತಾವಾಗಿ ಬರುವುದಿಲ್ಲ. ಅವುಗಳನ್ನು ಹುಡುಕಬೇಕು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಪಾಲಕರ ಕನಸನ್ನು ನನಸು ಮಾಡಬೇಕು ಎಂದು ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಎಂಸಿಎ ಸಂಸ್ಥೆಯ ನಿರ್ದೇಶಕ ಡಾ. ಸೂರಜ ಜೈನ್ ಹೇಳಿದರು.

ಇಲ್ಲಿನ ಮೃತ್ಯುಂಜಯನಗರದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025- 2026ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರಡಿಗುಡ್ಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಕಾಶ ಸುಣಗಾರ ಮಾತನಾಡಿ, ವಿದ್ಯಾರ್ಥಿಗಳು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಕಠಿಣ ಪರಿಶ್ರಮದಿಂದ ಗುರಿ ತಲುಪಬೇಕು. ಮಾದಕ ವಸ್ತುಗಳಿಂದ ದೂರ ಇರಬೇಕು ಎಂದರು.

ಪ್ರಾಚಾರ್ಯ ಡಾ. ಭರಮಪ್ಪ ಭಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವನಿತಾ ಮತ್ತು ಸೋನಿಯಾ ನಿರೂಪಿಸಿದರು. ಶಿವಕುಮಾರ ತುರಮರಿಮಠ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net