ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ, ಕ್ರೀಡಾ ವೇದಿಕೆ ಸಹಕಾರಿ : ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್

ಮೈಸೂರು ನಗರದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಾಂಸ್ಕೃತಿಕ, ಕ್ರೀಡಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ ಉದ್ಘಾಟಿಸಿದರು. ಎಂ. ಸವಿತಾ,  ಎಂ. ಶಿವರಾಜು, ಡಾ.ಎಂ. ಶಾರದಾ, ಡಾ.ಜಿ. ಪ್ರಸಾದಮೂರ್ತಿ ಹಾಗೂ ಇತರರು ಇದ್ದರು.
ಮೈಸೂರು ನಗರದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಾಂಸ್ಕೃತಿಕ, ಕ್ರೀಡಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ ಉದ್ಘಾಟಿಸಿದರು. ಎಂ. ಸವಿತಾ, ಎಂ. ಶಿವರಾಜು, ಡಾ.ಎಂ. ಶಾರದಾ, ಡಾ.ಜಿ. ಪ್ರಸಾದಮೂರ್ತಿ ಹಾಗೂ ಇತರರು ಇದ್ದರು.
Published on: 

ಮೈಸೂರು: ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ, ಅವರಲ್ಲಿರುವ ಪ್ರತಿಭೆಗಳನ್ನು ಹೊರ ತರಲು, ನಾಯಕತ್ವ ಗುಣ ಬೆಳೆಸಲು ಹಾಗೂ ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳಲು ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಅವಶ್ಯಕತೆ ಇದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ ಅಭಿಪ್ರಾಯಪಟ್ಟರು.

ನಗರದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಟರಾಜ ಸಭಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪುಸ್ತಕದಲ್ಲಿರುವ ಜ್ಞಾನ ಪಡೆಯುವ ಜತೆಗೆ ಸಂಗೀತ, ನೃತ್ಯ, ನಾಟಕ, ಭಾಷಣ, ಚರ್ಚೆ ಇತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಒಂದು ಆತ್ಮಸ್ಥೈರ್ಯ ತುಂಬುತ್ತದೆ. ವೇದಿಕೆಯಲ್ಲಿ ನಿಂತು ಮಾತನಾಡುವ ಧೈರ್ಯ ಬೆಳೆಸಿಕೊಳ್ಳಬೇಕು. ಅದಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದೆ ಎಂದು ಹೇಳಿದರು.

ನಿಮ್ಮಲ್ಲಿರುವ ಪ್ರತಿಭೆ ಹುದುಗಿ ಹೋಗದಂತೆ ಎಚ್ಚರ ವಹಿಸಬೇಕು. ಪ್ರತಿಭೆಯನ್ನು ಸಹಪಾಠಿಗಳ ಎದುರು, ಕಾಲೇಜುಗಳ ವೇದಿಕೆಯಲ್ಲಿ ಪ್ರದರ್ಶಿಸಬೇಕು. ಸಾಂಸ್ಕೃತಿಕ ಚಟುವಟಿಕೆಯ ಜತೆಗೆ ಕ್ರೀಡೆಯಲ್ಲಿಯೂ ತೊಡಗಿಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಶಕ್ತಿಯನ್ನು ತುಂಬುತ್ತದೆ ಎಂದರು.

ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮಾತ್ರ ಶಿಕ್ಷಣದ ಉದ್ದೇಶವಲ್ಲ, ಜ್ಞಾನ ಹೊಂದಿರುವ ವಿದ್ಯಾರ್ಥಿ ಒಳ್ಳೆಯ ವಿದ್ಯಾರ್ಥಿ ಆಗಬಹುದು. ಆದರೆ, ಜ್ಞಾನದ ಜತೆಗೆ ಮೌಲ್ಯವೂ ಇದ್ದರೆ ಉತ್ತಮ ಮನುಷ್ಯರಾಗುತ್ತಾರೆ. ಹಾಗಾಗಿ ಉತ್ತಮ ಜ್ಞಾನ, ಉತ್ತಮ ವ್ಯಕ್ತಿತ್ವ ಹೊಂದಿರುವ ಸಾಮಾಜಿಕ ಜವಾಬ್ದಾರಿಯುಳ್ಳವರನ್ನು ರೂಪಿಸುವುದೇ ನಿಜವಾದ ಶಿಕ್ಷಣ ಎಂದು ಅಭಿಪ್ರಾಯಪಟ್ಟರು.

ನಟರಾಜ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯೆ ಎಂ. ಸವಿತಾ, ಆಡಳಿತಾಧಿಕಾರಿ ಎಂ. ಶಿವರಾಜು, ಕಾಲೇಜು ಪ್ರಾಂಶುಪಾಲೆ ಡಾ.ಎಂ. ಶಾರದಾ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ಜಿ. ಪ್ರಸಾದಮೂರ್ತಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net