

ಸುಬ್ರಹ್ಮಣ್ಯ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಪೂರಕ. ಮಕ್ಕಳಿಗೆ ಕಲಾ ಚಟುವಟಿಕೆಗಳನ್ನು ನೆರವೇರಿಸಲು ಅವಕಾಶ ಮಾಡಿಕೊಟ್ಟಾಗ ಅವರೊಳಗಿನ ಕಲೆ ಅನಾವರಣಗೊಳ್ಳುತ್ತದೆ ಎಂದು ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಹೇಳಿದರು.
ಬಿಳಿನೆಲೆಯ ಶ್ರೀ ವೇದವ್ಯಾಸ ವಿದ್ಯಾಲಯದ ಸಾಂಸ್ಕೃತಿಕ ಸಂಘ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬ್ಯಾಂಕ್ ಆಫ್ ಬರೋಡಾ ನೆಟ್ಟಣ ಶಾಖೆ ವ್ಯವಸ್ಥಾಪಕ ನಟರಾಜ್ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಸತ್ಯಶಂಕರ ಭಟ್, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಕೇಶವ ಗೌಡ, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ ಕಮಲಾಕ್ಷ, ವೇದವ್ಯಾಸ ವಿದ್ಯಾಲಯದ ಮುಖ್ಯಗುರು ಪ್ರಶಾಂತ್ ಬಿ. ಉಪಸ್ಥಿತರಿದ್ದರು. ಶಿಕ್ಷಕಿ ರಜನಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಭುವನೇಶ್ವರಿ ವಂದಿಸಿದರು.