ಯುವ ಸಮುದಾಯಕ್ಕೆ ಸಂಸ್ಕೃತಿ ತಿಳಿವಳಿಕೆ: ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಸಾಯಿನಾಥ್ ಶೆಟ್ಟಿ ಹೇಳಿಕೆ

ati
ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಶಿಕ್ಷಣ ಸಂಸ್ಥೆ ನಿವೃತ್ತ ಶಿಕ್ಷಕ ಮುಂಡ್ಕೂರು ಸಾಯಿನಾಥ್ ಶೆಟ್ಟಿ ಉದ್ಘಾಟಿಸಿದರು
Published on

ಕಾರ್ಕಳ: ತುಳುನಾಡಿನ ಆಟಿ ತಿಂಗಳಲ್ಲಿ ಹಿರಿಯರು ಆಚರಿಸಿಕೊಂಡು ಬಂದ ಸಂಪ್ರದಾಯ, ಆಚಾರ-ವಿಚಾರ, ವೈಜ್ಞಾನಿಕ ಸಂಗತಿ ಯುವ ಸಮುದಾಯಕ್ಕೆ ತಿಳಿಸಿಕೊಡುವ ಕಾರ್ಯ. ಇಂತಹ ಆಚರಣೆಯಿಂದ ನಮ್ಮತನದ ಉಳಿವು ಸಾಧ್ಯ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಶಿಕ್ಷಣ ಸಂಸ್ಥೆ ನಿವೃತ್ತ ಶಿಕ್ಷಕ ಮುಂಡ್ಕೂರು ಸಾಯಿನಾಥ್ ಶೆಟ್ಟಿ ಹೇಳಿದರು.

ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಬ್ಬನಡ್ಕ ಕುಂಟಲಗುಂಡಿಯಲ್ಲಿ ಭಾನುವಾರ ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ಧರ್ಮಶ್ರೀ ರಿಲೀಫ್ ಫೌಂಡೇಶನ್ ಸಂಸ್ಥಾಪಕ ಬೈಂದೂರು ನಾಗರಾಜ್ ಆರ್.ಸುವರ್ಣ ಅವರ ಉದ್ಯಮ ಕ್ಷೇತ್ರದ ಸಾಧನೆಗೆ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಕುಂಟಲಗುಂಡಿ ರಾಜು ಶೆಟ್ಟಿ, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಉಪಸ್ಥಿತರಿದ್ದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಕಾಸರಬೈಲು ಸುರೇಶ್ ಸ್ವಾಗತಿಸಿ, ಪೂರ್ವಾಧ್ಯಕ್ಷ ಬೋಳ ಉದಯ ಅಂಚನ್ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯಕ್ರಮ ನಿರ್ದೇಶಕಿ ಹರಿಣಿ ಪೂಜಾರಿ ವಂದಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ.ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net