ಮಾ.೨೨ ರಂದು ಪದಗ್ರಹಣ, ಸಾಂಸ್ಕೃತಿಕ ಸಂಭ್ರಮ

logo
Published on

ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕತಿಕ ಸಂಭ್ರಮ ಮಾ.೨೨ ರಂದು ಶನಿವಾರ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಎಚ್.ಟಿ.ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ರೆಡ್ ಬ್ರಿಕ್ಸ್ ಇನ್‌ನ ಸತ್ಕಾರ್ ಸಭಾಂಗಣದಲ್ಲಿ ಮಾ.೨೨ ರಂದು ಶನಿವಾರ ಸಂಜೆ ೬ ಗಂಟೆಗೆ ಆಯೋಜಿತ ಸಮಾರಂಭವನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದಾರೆ. ಸಂಘದ ಸ್ಟಿಕ್ಕರ್‌ಗಳನ್ನು ಕೂರ್ಗ್ ಹೋಟೇಲ್ಸ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬಿಡುಗಡೆಗೊಳಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ಮುರಳೀಧರ್ ಇತರರು ಉಪಸ್ಥಿತರಿರಲಿದ್ದಾರೆ.

ಸಂಘದ ವತಿಯಿಂದ ಆಯೋಜಿತ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಶ್ವದಾಖಲೆ ಮಾಡಿರುವ ಮದೆನಾಡಿನ ಸಿಂಚನಾಳಿಂದ ಯೋಗ ಪ್ರದರ್ಶನ, ವಿಕ್ರಂ ಜಾದೂಗಾರ್ ಅವರಿಂದ ಜಾದೂ ಪ್ರದರ್ಶನ, ಜತೆಗೇ ಕೊಡಗು ಪತ್ರಕರ್ತರ ಸಂಘ(ರಿ) ದ ಸದಸ್ಯರು, ಕುಟುಂಬ ವರ್ಗದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲ್ಪಿಟ್ಟಿವೆ ಎಚ್.ಟಿ.ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net