

ಮೂಲ್ಕಿ: ಮಕ್ಕಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ಆತ್ಮವಿಶ್ವಾಸ ವೃದ್ಧಿ ಸಾಧ್ಯ ಎಂದು ಕಾರ್ನಾಡು ಧರ್ಮಸ್ಥಾನ ಕ್ಷೇತ್ರದ ನಿತ್ಯ ಅರ್ಚಕ ಸದಾನಂದ ಪೂಜಾರಿ ಹೇಳಿದರು.
ಕಾರ್ನಾಡು ಧರ್ಮಸ್ಥಾನದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಆಶ್ರಯದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಕ್ಷೇತ್ರ ಹರಿಹರ ಯುವಕ ಮಂಡಲದ ಅಧ್ಯಕ್ಷ ಹರ್ಷರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ವಸಂತ ಕೋಟ್ಯಾನ್, ಮಾಜಿ ಅಧ್ಯಕ್ಷ ದಯಾನಂದ ಕೋಟ್ಯಾನ್, ಧರ್ಮಸ್ಥಾನ ಯುವಕ ವೃಂದದ ಅಧ್ಯಕ್ಷ ಪ್ರಕಾಶ್ ಮಂಜಟ್ಟೆ, ಮಹಿಳಾ ಮಂಡಳಿ ಅಧ್ಯಕ್ಷೆ ಉಷಾ ಶೇಖರ್, ಕಾರ್ಯದರ್ಶಿ ಗೀತಾ ಎಚ್.ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಯಿತು.