ಪಠ್ಯೇತರ ಚಟುವಟಿಕೆಯೂ ಮುಖ್ಯ

ಫೋಟೋ ಶೀರ್ಷಿಕೆ,14 ಸಿಆರ್_ಪಿ-1ಎ
Published on

ಚನ್ನರಾಯಪಟ್ಟಣ : ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ, ಕೌಶಲ್ಯತೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಶಿಕ್ಷಣ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯವಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಶನಿವಾರ ಸರ್ಕಾರಿ ಪ್ರೌಢಶಾಲೆಯ 2023- 24ನೇ ಸಾಲಿನ ಶಾಲಾ ಸಾಂಸ್ಕೃತಿಕ ಉತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳಲು ಉತ್ತೇಜನ ನೀಡಿದರೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲಾ ಸಿರಿಯನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರೇಪಣೆ ನೀಡಿದಂತಾಗುತ್ತದೆ ಎಂದರು.
ಪುರಸಭಾ ಸದಸ್ಯ ಬನಶಂಕರಿ ರಘು ಮಾತನಾಡಿದರು. ಕಾರ್ಯಕ್ರಮದಲ್ಲಿ 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿ, ಕೆ.ಆರ್.ಪೇಟೆ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಎಂ.ಜಿ.ರೇವಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಪ್ರಾಂಶುಪಾಲರಾದ ಕೆ.ಟಿ.ರಾಮೇಗೌಡ, ಎಚ್.ಆರ್. ಬಸವಲಿಂಗಮೂರ್ತಿ, ನಿವೃತ್ತ ಅಪಾರ ಜಿಲ್ಲಾಧಿಕಾರಿ ನಾಗಪ್ಪ, ಪ್ರತಿಮಾ ಟೆಸ್ಟ್ ಅಧ್ಯಕ್ಷ ಉಮೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಮಂಜಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಹಳ್ಳಿ ಮಂಜುನಾಥ್, ಮುಖ್ಯ ಶಿಕ್ಷಕ ಟಿ.ಆರ್.ರಮೇಶ್, ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net