ಮಾರಿಕಾಂಬಾ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Shravana
Published on

ಶಿರಸಿ: ಶ್ರಾವಣ ಮಾಸದ ಅಂಗವಾಗಿ ನಗರದ ಮಾರಿಕಾಂಬಾ ದೇವಾಲಯದಲ್ಲಿ ಶನಿವಾರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ನಗರದ ವಿವೇಕಾನಂದ ನಗರದ ವರಸಿದ್ಧಿ ವಿನಾಯಕ ಮಾತೃ ಮಂಡಳಿಯಿಂದ ಭಜನೆ, ತಟ್ಟಿಕೈನ ಓಂಕಾರ

ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮಗಳು ನಡೆದವು. ನಂತರದಲ್ಲಿ ಮೈಸೂರಿನ ಕಲ್ಪಿತಾ. ಎಂ. ರೇವಣಕರ ಅವರು ಭರತನಾಟ್ಯ ಪ್ರಸ್ತುತ ಪಡಿಸಿದರು.

ದೇವಾಲಯದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಆರ್.ಜಿ. ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net