ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ

5 ckm 3
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು.
Published on

ಚಿಕ್ಕಮಗಳೂರು: ಮಕ್ಕಳು ಓದಿನ ಒತ್ತಡದ ನಿವಾರಣೆಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು. ಆಗ ಮಕ್ಕಳ ಭೌತಿಕ, ಮಾನಸಿಕ ವಿಕಸನದೊಂದಿಗೆ ದೈಹಿಕವಾಗಿ ಸದೃಢರಾಗಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಬಾಲಾ ವಿಕಾಸ ಅಕಾಡೆಮಿಯಿಂದ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಯಾವಾಗಲೂ ಉತ್ಸಾಹದಲ್ಲಿರಲು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಸಾಧನೆಗೆ ದಾರಿ ಮಾಡಿಕೊಡಲು ಮಕ್ಕಳ ಹಬ್ಬದಂಥ ಕಾರ್ಯಕ್ರಮಗಳು ಸಹಕಾರಿ. ಮಕ್ಕಳು ತಮಗಿಷ್ಟವಾದ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳು ತಮ್ಮ ಆಟದ ಜತೆಗೆ ಓದಿನ ಕಡೆಯು ಹೆಚ್ಚು ಗಮನಹರಿಸಿ ತಮ್ಮ ಗುರಿ ಸಾಧಿಸಬೇಕು. ಮಕ್ಕಳ ಹಬ್ಬ ಕಾರ್ಯಕ್ರಮಗಳು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ. ಪ್ರತಿ ಗ್ರಾಮಗಳಲ್ಲೂ ಆಚರಿಸುವಂತಾಗಬೇಕು. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಗುರುತಿಸಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಸಮಾನತೆ ಕಲ್ಪಿಸುವುದರೊಂದಿಗೆ ಅವರುಗಳಲ್ಲಿ ಕ್ರಿಯಾಶೀಲತೆ, ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net