ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
Published on

ಶನಿವಾರಸಂತೆ: ಸಮೀಪದ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ 14ನೇ ವರ್ಷದ ಗೌರಿ ಗಣೇಶ ಸೇವಾ ಸಮಿತಿ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಬುಧವಾರ ರಾತ್ರಿ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆಲೂರು ಸಿದ್ದಾಪುರ ಗ್ರಾ.ಪಂ. ಸದಸ್ಯ ಪಿ.ಎನ್.ಗಂಗಾಧರ್ ಮಾತನಾಡಿ, ಗ್ರಾಮದಲ್ಲಿ ಒಗ್ಗಟ್ಟು ಇದ್ದಲ್ಲಿ ಗ್ರಾಮ ಅಭಿವೃದ್ಧಿಯಾಗುತ್ತದೆ. ಕಣಿವೆ ಬಸವನಹಳ್ಳಿ ಗ್ರಾಮಸ್ಥರು ಒಗ್ಗಟ್ಟಾಗಿ 14 ವರ್ಷಗಳಿಂದ ಗೌರಿ ಗಣೇಶ ಸೇವಾ ಸಮಿತಿ ಸಹಭಾಗಿತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ ಎಂದರು.

ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಜೆ.ಪ್ರಸನ್ನಕುಮಾರ್, ಮಾಲಂಬಿ ಗ್ರಾಮ ಸಮಿತಿ ಅಧ್ಯಕ್ಷ ಎಂ.ಇ.ವೆಂಕಟೇಶ್, ಮಾಲಂಬಿ ಕನ್ನಂಬಾಡಿ ಅಮ್ಮನವರ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಡಿ.ಸುರೇಶ್ ಮಾತನಾಡಿದರು.

ಗೌರಿ ಗಣೇಶ ಸೇವಾ ಸಮಿತಿ ಅಧ್ಯಕ್ಷ ಸೂರಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಫಿ ಬೆಳೆಗಾರ ಸುಶೀಮ್ ಗೌಡ, ಕುಶಾಲಪ್ಪ, ಸಿಂಧು ಕುಮಾರ್, ಲಕ್ಷ್ಮೀ ಶಂಕರ್, ಅರ್ಚಕ ಲಿಂಗರಾಜು ಇತರರು ಇದ್ದರು. ತೊರೆನೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಆರ್.ಅನೀಲ್ ಅವರನ್ನು ಸೇವಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net