

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವ ಜಯಂತಿ ಪ್ರಯುಕ್ತ ಜನಚೈತನ್ಯ ಫೌಂಡೇಶನ್ ವತಿಯಿಂದ ನಗರದ ಪುರಭವನದಲ್ಲಿ ಮೇ 19ರಂದು ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಆರ್.ಲಕ್ಷ್ಮಣ್ ತಿಳಿಸಿದರು.
ಅಂಬೇಡ್ಕರ್, ಬಸವ ಮತ್ತು ಗೌತಮ ಬುದ್ಧ ಕುರಿತ ಗೀತೆಗಳನ್ನು ಪ್ರಸ್ತುತ ಪಡಿಸಲಾಗುವುದು. ಜತೆಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತದೆ. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖಂಡ ರಾಜೀವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗಾಯಕರಾದ ಜಾಯ್ಸ ಪೀಟರ್, ಆರ್.ಎನ್.ಸಂತೋಷ್ ಕುಮಾರ್, ಡಿ.ಎಲ್.ವಿಕಾಸ್ ಇದ್ದರು.