

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಕಲಾ ಮಂಟಪವು ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ ಸಹಯೋಗದಲ್ಲಿ ಜು. 31ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕಲೆ ಸಂಸ್ಕೃತಿಗೆ ಉತ್ತರ ಕರ್ನಾಟಕದ ಕೊಡುಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.
ಸಾಹಿತಿ ಡಾ. ಗುರುದೇವಿ ಹುಲ್ಲೆಪ್ಪನವರ ಅತಿಥಿ ಉಪನ್ಯಾಸ ನೀಡುವರು. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸುವರು. ಬೆಳಗಾವಿಯ ಬೆಳ್ಳಿಚುಕ್ಕಿ ಅಕಾಡೆಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.