ಆರ್ಡಿ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

ardi
Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಕ್ಕಳ ಸಾಂಸ್ಕೃತಿಕಾ ವೈಭವ ಸಂಭ್ರಮಾಚರಣೆ ಜ.4ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಬೆಳಗ್ಗೆ 9.30ಕ್ಕೆ ದಾನಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು, ಎಸ್‌ಡಿಎಂಸಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ, ಸಾಂಸ್ಕೃತಿಕ ವೈಭವ ಹಾಗೂ ಮನೋರಂಜನಾ ಕಾರ್ಯಕ್ರಮ ನಡೆಯಲಿವೆ.

ಆರ್ಡಿಯಲ್ಲಿ 1925ರಲ್ಲಿ ಆರಂಭವಾದ ಶಾಲೆ 2025-26ನೇ ಸಾಲಿನಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಗೆ ಸಾಕ್ಷಿಯಾಗಲಿದೆ. 4.47 ಎಕರೆ ವಿಶಾಲ ಸ್ಥಳದಲ್ಲಿ ಸುಸಜ್ಜಿತ ಶಾಲಾ ಕಟ್ಟಡ, ಶಿಕ್ಷಕರ ಕೊಠಡಿ, ಕಂಪ್ಯೂಟರ್ ಕೊಠಡಿ, ಸಭಾಂಗಣ, ಬಯಲು ರಂಗಮಂದಿರ, ಕ್ರೀಡಾ ಮೈದಾನ. ಹಿಂಭಾಗದಲ್ಲಿ ಕ್ರೀಡಾ ಮೈದಾನಕ್ಕೆ ವಿಶಾಲ ಸ್ಥಳವನ್ನು ಶಾಲೆ ಹೊಂದಿದೆ.

ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಕಂಪ್ಯೂಟರ್ ಶಿಕ್ಷಣಕ್ಕೆ ಅವಕಾಶವಿದೆ. ಪ್ರಸ್ತುತ 161 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಪಠ್ಯ ಪಠ್ಯೇತರ, ಕ್ರೀಡೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟಗಳಲ್ಲಿ ಸ್ಪರ್ಧಿಸಿ ಉತ್ತಮ ಸಾಧನೆಗೈದಿದ್ದಾರೆ. ದಾನಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶಾಲೆಗೆ ವಿವಿಧ ಕೊಡುಗೆ ನೀಡಿ ಶಾಲೆ ಪ್ರಗತಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net