

ತುಮಕೂರು: ಧರ್ಮದ ಮೂಲಕ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯ ವಾಡಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಟಕದ ರಾಜ್ಯಾಧ್ಯಕ್ಷೆ ಬಿ.ವೈ.ಅರುಣಾದೇವಿ ಹೇಳಿದರು.
ಸಿದ್ಧಗಂಗಾ ಮಠದಲ್ಲಿ ಗುರುವಾರ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಕುಟುಂಬ ವ್ಯವಸ್ಥೆ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಟಕದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆಯಲು ಶ್ರೀಮಠಕ್ಕೆ ಬಂದಿದ್ದೇನೆ, ಉತ್ತಮವಾಗಿ ಕೆಲಸ ವಾಡುವಂತೆ ಶ್ರೀಗಳು ಆಶೀರ್ವದಿಸಿದ್ದಾರೆ ಎಂದರು.
ಅರುಣಾದೇವಿ ಪತಿ ಉದಯಕುವಾರ್, ಪುತ್ರಿ ವಾಧುರ್ಯ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಹಾಸಭಾ ಜಿಲ್ಲಾಧ್ಯಕ್ಷ ಮೋಹನಕುವಾರ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಿವಕುವಾರ್, ಜಿಲ್ಲಾ ಉಪಾಧ್ಯಕ್ಷ ಚಂದ್ರಮೌಳಿ, ಶೇಖರ್, ಟಿ.ಆರ್.ಸದಾಶಿವಯ್ಯ, ಬಿಜೆಪಿ ಮಹಿಳಾ ಟಕದ ಅಂಬಿಕಾ ಇದ್ದರು.
ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಗುಬ್ಬಿಯ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ಅರುಣಾದೇವಿ, ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಜಿಲ್ಲಾಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಸದಸ್ಯೆ ಡಾ.ನವ್ಯಾಬಾಬು, ತಾಪಂ ಸದಸ್ಯರಾದ ಮಮತಾ, ಜಿ.ಕಲ್ಪನಾ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು, ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ, ಮುಖಂಡ ಬೆಟ್ಟಸ್ವಾಮಿ, ಮಹಾಸಭಾ ತಾಲೂಕು ಅಧ್ಯಕ್ಷ ಹೇರೂರು ರಮೇಶ್, ಉಪಾಧ್ಯಕ್ಷರಾದ ಹರೀಶ್, ಶ್ಯಾಮಲಾ, ಪದಾಧಿಕಾರಿಗಳು ಇದ್ದರು.