ಜನರ ಅಲೆದಾಟಕ್ಕೆ ಕಡಿವಾಣ ಹಾಕಿ

IMG-20230925-WA0013
Published on

ಚಿತ್ರದುರ್ಗ: ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳಿಗೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಧಿಕಾರಿಗಳು ಶ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಸೂಚಿಸಿದರು.

ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಹಾ ಪ್ಯಾಲೇಸ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರ ಸಮಸ್ಯೆ ಈಡೇರಿಸಲು ಜನತಾದರ್ಶನ ಬುನಾದಿ ಆಗಲಿದೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯ. ಇದಕ್ಕೆ ಧಕ್ಕೆ ಆಗದ ರೀತಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.

ಚಿತ್ರದುರ್ಗ ತಾಲೂಕಿನಲ್ಲಿ 800 ಚಳ್ಳಕೆರೆ-900 ಹಿರಿಯೂರು-950 ಹೊಳಲ್ಕೆರೆ- 1285, ಹೊಸದುರ್ಗ -1441, ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 1530 ಪೌತಿ ಖಾತೆ ಸೇರಿ ಜಿಲ್ಲೆಯಲ್ಲಿ 6500ಕ್ಕೂ ಹೆಚ್ಚು ಪೌತಿ ಖಾತೆಗಳು ಆಗಬೇಕಿದೆ. ಅಕ್ಟೋಬರ್ 31 ರ ಒಳಗೆ ಈ ಪೌತಿ ಖಾತೆಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ವತಿಯಿಂದ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕಾಲಮಿತಿಯೊಳಗೆ ಈ ಪೌತಿ ಖಾತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net