ಚಿಕಿತ್ಸೆ ಸಿಗದೆ ರೋಗಿ ಸಾವು

Death 5 May 20
Published on

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಉಜ್ವಲ ನಗರದ 50 ವರ್ಷದ ರೋಗಿಯೊಬ್ಬರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಜಿಲ್ಲಾಸ್ಪತ್ರೆಯ ಹೊರಗಡೆಯೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ತೀವ್ರ ಬೇಧಿ ಹಾಗೂ ಅಶಕ್ತತೆಯಿಂದ ಬಳಲುತ್ತಿದ್ದ ರೋಗಿಗೆ ಖಾಸಗಿ ಆಸ್ಪತ್ರೆಯವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ‘ಕರೊನಾ ಟೆಸ್ಟ್ ಮಾಡಿಸಿದ್ದೇವೆ, ವರದಿ ನೆಗೆಟಿವ್ ಬಂದಿದೆ’ ಎಂದು ಕೇಳಿಕೊಂಡರೂ ಜಿಲ್ಲಾಸ್ಪತ್ರೆ ಸಿಬ್ಬಂದಿ ಸರಿಯಾಗಿ ಸ್ಪಂದಿಸದೆ ಮತ್ತೆ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ವೇಳೆ ಆಂಬುಲೆನ್ಸ್ ನಲ್ಲೇ ರೋಗಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಚಿಕಿತ್ಸೆಗೆಂದು 4 ಗಂಟೆ ಅಲೆದಿದ್ದೇವೆ. ಕಷ್ಟಪಟ್ಟು ಕರೊನಾ ಪರೀಕ್ಷೆ ಮಾಡಿಸಿಕೊಂಡು ಬಂದರೂ ಆಸ್ಪತ್ರೆಯವರು ಚಿಕಿತ್ಸೆಗೆ ದಾಖಲಿಸಿಕೊಳ್ಳಲಿಲ್ಲ. ಇದರಿಂದ ನಮ್ಮ ಕುಟುಂಬದ ಓರ್ವ ಸದಸ್ಯನನ್ನು ಕಣ್ಣೆದುರೇ ಕಳೆದುಕೊಳ್ಳುವಂತಾಯಿತು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net