ಸಮನ್ವಯ ಸಮಿತಿ ಸಭೆಗೆ ಹಾಲಿ, ಮಾಜಿ ಗೈರು

03-04-Shiva-1
ರಾಯಚೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆ ಬುಧವಾರ ಜರುಗಿತು. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಶಾಸಕ ಡಾ.ಶಿವರಾಜ ಪಾಟೀಲ್, ಕರೆಮ್ಮ ನಾಯಕ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಗಂಗಾಧರ ನಾಯಕ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಇದ್ದರು.
Published on

ರಾಯಚೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಜರುಗಿದ ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಮನ್ವಯ ಸಮಿತಿ ಸಭೆಗೆ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ಬಿ.ವಿ.ನಾಯಕ ಗೈರು ಹಾಜರಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು.
ಟಿಕೆಟ್ ಕೈತಪ್ಪಿದ್ದರಿಂದ ಬೆಂಬಲಿಗರ ಪ್ರತ್ಯೇಕ ಸಭೆ ನಡೆಸಿದ್ದ ಬಿ.ವಿ.ನಾಯಕ ನಡೆ ಇನ್ನೂ ನಿಗೂಢವಾಗಿದೆ. ಅಕೃತ ಅಭ್ಯರ್ಥಿ ಹಾಗೂ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಬಿ.ವಿ.ನಾಯಕ ಜತೆಗೆ ಮಾತುಕತೆ ನಡೆಸಿರುವುದಾಗಿ ಹೇಳುತ್ತಿದ್ದರೂ ಬಿವಿಎನ್ ಅಸಮಾಧಾನ ಇನ್ನೂ ತಣಿದಿಲ್ಲ.
ಬಿ.ವಿ.ನಾಯಕಗೆ ಬೆಂಬಲ ಸೂಚಿಸಿದ್ದ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಕೂಡಾ ತಮ್ಮ ಸಹೋದರನಿಗೆ ಆರೋಗ್ಯ ಸಮಸ್ಯೆ ಕಾರಣ ನೆಪದಲ್ಲಿ ಸಭೆಗೆ ಆಗಮಿಸಿಲ್ಲ. ದೇವದುರ್ಗದ ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಕೂಡಾ ವೈಯಕ್ತಿಕ ಕಾರಣ ನೆಪವೊಡ್ಡಿ ಸಭೆಯಿಂದ ದೂರ ಉಳಿದಿದ್ದಾರೆ.
ಸಮನ್ವಯ ಸಭೆಯಲ್ಲಿ ಎರಡು ಪಕ್ಷದ ನಾಯಕರು ಒಗ್ಗೂಡಿ ಪ್ರಚಾರ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದ್ದು, ಅಭ್ಯರ್ಥಿ ಜೆಡಿಎಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವ ಮಾತುಗಳನ್ನು ಜೆಡಿಎಸ್ ನಾಯಕರು ಆಡಿದ್ದಾರೆ.
ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಶಾಸಕ ಡಾ.ಶಿವರಾಜ ಪಾಟೀಲ್, ಕರೆಮ್ಮ ನಾಯಕ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಗಂಗಾಧರ ನಾಯಕ, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net