ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಾರ್ಷಿಕ ಸರ್ವ ಸಾಧಾರಣ ಸಭೆ

Veerabhadreshwara Jatra festival begins today
Published on

ವಿಜಯಪುರ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಟಕದ ಪ್ರಸಕ್ತ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸೆ. 9 ರಂದು ಬೆಳಗ್ಗೆ 11 ಗಂಟೆಗೆ ನಗರದ ವೀರಶೈವ ಲಿಂಗಾಯತ ಸಮುದಾಯ ಭವನದ 3ನೇ ಮಹಡಿಯಲ್ಲಿರುವ ಪೂಜ್ಯ ಹಾನಗಲ್​ ಕುಮಾರ ಸ್ವಾಮೀಜಿ ಸಭಾ ಭವನದಲ್ಲಿ ನಡೆಯಲಿದೆ.

ಜಿಲ್ಲಾ ಟಕದ ಅಧ್ಯಕ್ಷ ವಿ.ಸಿ. ನಾಗಠಾಣ ಅಧ್ಯಕ್ಷತೆ ಸಭೆ ಅಧ್ಯಕ್ಷತೆ ವಹಿಸುವರು ಎಂದು ಮಹಾಸಭೆ ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಪ್ರತಿ ವರ್ಷದಂತೆ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ನೀಡಲು ನಿರ್ಧರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಸೆ. 30 ರೊಳಗಾಗಿ ಅಖಿಲ ಭಾರತ ವೀರಶೈವ ಮಹಾಸಭಾ, ಸಜ್ಜನ ಲೇಔಟ್​, ಬಂಜಾರಾ ಕಾಲೇಜು ಎದುರಿಗೆ, ವಿಜಯಪುರ ಈ ವಿಳಾಸಕ್ಕೆ ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net