ಗ್ರಾಹಕರೇ ಸಂಸ್ಥೆಯ ಜೀವಾಳ

23 vikram 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಶ್ರೀ ಚಿದಂಬರ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅವಳಿ ಶಾಖೆಗಳ ಗ್ರಾಹಕರ ಸಂಪರ್ಕ ಸಭೆಯು ಇಲ್ಲಿನ ಶ್ರೀಮದ್​ ಶಂಕರಾಚಾರ್ಯ ಸಂಸ್ಕೃತ ಪಾಠ ಶಾಲೆ ಸಭಾಭವನದಲ್ಲಿ ಭಾನುವಾರ ಜರುಗಿತು.
ಸಂಸ್ಥೆ ಅಧ್ಯಕ್ಷ ಜಿ.ಕೆ. ಕುಲಕರ್ಣಿ ಸಭೆ ಉದ್ಘಾಟಿಸಿ ಮಾತನಾಡಿ, ಹೆಚ್ಚಿನ ಜನರು ಸದಸ್ಯತ್ವ ಪಡೆದರೆ ಸಂಸ್ಥೆ ಆರ್ಥಿಕವಾಗಿ ಬಲಗೊಳ್ಳಲು ಸಹಕಾರವಾಗುತ್ತದೆ. ಮುಂದಿನ ದಿನಗಳಲ್ಲಿ ವ್ಯವಹಾರ ನಡೆಸಲು ಸದಸ್ಯರ ಸಹಕಾರ ಮತ್ತು ವಿಶ್ವಾಸ ಮುಖ್ಯ. ಹೀಗಾಗಿ ಎಲ್ಲರೂ ಕೈ ಜೋಡಿಸುವ ಮೂಲಕ ಸಂಸ್ಥೆಯನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರಿಗೆ ಹಾಗೂ ಕ್ರೀಡಾಪಟುಗಳಿಗೆ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ಲಾಭಾಂಶ ಪ್ರಕಟಿಸಲಾಯಿತು.
ಸಂಸ್ಥೆ ಉಪಾಧ್ಯಕ್ಷ ಅರವಿಂದ ಪೂಜಾರ, ಸಿಇಒ ಮಂಜುನಾಥ ಕುಲಕರ್ಣಿ, ಎಜಿಎಂ ಎಚ್​.ಆರ್​. ಇನಾಮದಾರ, ನಿರ್ದೇಶಕ ಮಂಡಳಿ ಆಡಳಿತಾಧಿಕಾರಿಗಳು, ಸಿಬ್ಬಂದಿ, ಗ್ರಾಹಕರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net