

ಬೆಳಗಾವಿ: ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ,10 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ಮೂಲತಃ ಉತ್ತರ ಪ್ರದೇಶ ರಾಜ್ಯದ ಮಲಿಯಾಬಾದ ತಾಲೂಕಿನ ಮೌರಾತಕಿಯಾ ಪೋಸ್ಟಬರವನಕಲ್ ಗ್ರಾಮದ ಮಹ್ಮದ್ ಶಪಿಕ ಮಹ್ಮದ್ ರಪೀಕ್ (24) ಶಿಕ್ಷೆಗೆ ಒಳಗಾದ ಅಪರಾಧಿ.
ಘಟನೆ ವಿವರ: 2018ರಲ್ಲಿ ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದನು. ಈ ಕುರಿತು ಅಥಣಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ತನಿಖಾಧಿಕಾರಿ ಎಲ್.ಎಸ್. ಅಜ್ಜನಗಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕೋ ನ್ಯಾಯಾಲಯಕ್ಕೆ ದೋಷಾರೋಪಣಿ ಪಟ್ಟಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.