

ಕೋಟ: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆ, ಕೋಟ ಗ್ರಾಪಂ ಅಂಗನವಾಡಿ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ-ಪೋಷಣ್ ಮಾಸಾಚರಣೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು ಪ್ರಸ್ತುತಿಯಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಶನಿವಾರ ಮಣೂರು ಮಹಾಲಿಂಗೇಶ್ವರ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಎಚ್.ಕುಂದರ್ ಉದ್ಘಾಟಿಸಿದರು.
ಮಣೂರು ಮಹಾಲಿಂಗೇಶ್ವರ ದೇಗುಲದ ಜೀರ್ಣೋದ್ಧಾರ ಸಮಿತಿಯ ವಿಷ್ಣಮೂರ್ತಿ ಮಯ್ಯ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ.ಮಯ್ಯ, ಕೋಟ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಹರೀಶ್ಚಂದ್ರ ನಾಯಕ್, ಮಿಷನ್ ಶಕ್ತಿ ಜಿಲ್ಲಾ ಸಂಯೋಜಕಿ ಶಾರದ, ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ತೀರ್ಪುಗಾರರಾಗಿ ನಮೃತಾ ಪ್ರಭು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನೆ, ಬ್ರಹ್ಮಾವರ ಮೇಲ್ವಿಚಾರಕಿ ಲಕ್ಷ್ಮೀ ಸ್ವಾಗತಿಸಿದರು. ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ನಿರೂಪಿಸಿದರು. ಶ್ರೀರಾಮಪ್ರಸಾದ ಅಂಗನವಾಡಿ ಕಾರ್ಯಕರ್ತೆ ನಿರ್ಮಲ ಉರಾಳ ವಂದಿಸಿದರು.