ಬೆಲೆಬಾಳುವ ಮರಗಳ ಹನನ

17_HSN_03
ಮರ ಕಡಿದಿರುವ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮಕ್ಕೆ ಶನಿವಾರ ತಹಸೀಲ್ದಾರ್ ಮಮತಾ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
Published on

ಬೇಲೂರು: ತಾಲೂಕಿನ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ದುಷ್ಕರ್ಮಿಗಳು ಕಡಿದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಶನಿವಾರ ಸ್ಥಳಕ್ಕೆ ತಹಸೀಲ್ದಾರ್ ಮಮತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರ ಸರ್ಕಾರಿ ಭೂಮಿಯಲ್ಲಿ ಮುನ್ನೂರಕ್ಕೂ ಹೆಚ್ಚು ಸಾಗುವಾನಿ, ಹೊನ್ನೆ, ಬೀಟೆ, ಹಲಸು ಇನ್ನಿತರ ಬೆಲೆಬಾಳುವ ಕಾಡು ಜಾತಿ ಮರಗಳನ್ನು ಕಡಿದಿದ್ದಾರೆ.

ನಂದಗೋಡನಹಳ್ಳಿಗೆ ಶನಿವಾರ ರೆವಿನ್ಯೂ ಇನ್‌ಸ್ಪೆಪೆಕ್ಟರ್ ಹಾಗೂ ಗ್ರಾಮಲೆಕ್ಕಿಗ ಹಕ್ಕುಪತ್ರ ನೀಡಲೆಂದು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ತಿಳಿದು ಬಂದಿದ್ದು, ತಕ್ಷಣ ತಹಸೀಲ್ದಾರ್ ಮಮತಾ ಅವರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ತಹಸೀಲ್ದಾರ್ ಮಮತಾ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಬೆಲೆಬಾಳುವ ಸಾಗುವಾನಿ, ಹೊನ್ನೆ, ಬೀಟೆ, ಹಲಸು ಸೇರಿದಂತೆ ಮುಂತಾದ ಜಾತಿಯ ಮರಗಳನ್ನು ಕಡಿದು ಹಾಕಲಾಗಿದೆ. ತಪ್ಪಿಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net