8ರಂದು ಸೈಬರ್ ಹಾಸ್ಯ ಸಂಜೆ ಕಾರ್ಯಕ್ರಮ

Published on


ಅರಕಲಗೂಡು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅ.8ರಂದು ಸಂಜೆ 5 ಗಂಟೆಗೆ ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಸೈಬರ್ ಹಾಸ್ಯ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹೇಶ್ ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ನೌಕರರ ಹಿತ ಕಾಯ್ದು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಹಾಗೆಯೇ ಜಿಲ್ಲಾಧ್ಯಕ್ಷ ಕೃಷ್ಣೆಗೌಡರು ಸಹ ನೌಕರರ ಕುಂದುಕೊರತೆಗಳನ್ನು ಚರ್ಚಿಸಿ, ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಾಗತಿಕ ಮಟ್ಟದಲ್ಲಿ ಸೈಬರ್ ಭದ್ರತಾ ಕಾರ್ಯಕ್ರಮದ ಮಾಸಾಚರಣೆ ಅಂಗವಾಗಿ ಗಂಗಾವತಿ ಪ್ರಾಣೇಶ್ ತಂಡದಿಂದ ಸೈಬರ್ ಹಾಸ್ಯ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕು, ಜಿಲ್ಲೆಯ ಎಲ್ಲ ನೌಕರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ಇದೇ ತಿಂಗಳು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಕ್ರೀಡಾಕೂಟದಲ್ಲಿ ತಾಲೂಕಿನಿಂದ 40 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಹಾಗೆಯೇ ಹೆಚ್ಚಿನ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಈ ವೇಳೆ ನೀಡುತ್ತಿದ್ದ ಹಣದ ಮೊತ್ತವನ್ನು 500 ರೂ. ನಿಂದ 1 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಎಂದರು.

ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಚಂದ್ರೆಗೌಡ, ಖಜಾಂಚಿ ಪುಟ್ಟರಾಜು, ಗೌರವಾಧ್ಯಕ್ಷ ತಾರಾನಾಥ್, ಕ್ರೀಡಾ ಕಾರ್ಯದರ್ಶಿ ಯೋಗನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net