ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಜಾಗೃತಿ ಅಗತ್ಯ

hly
Published on

ಹಳಿಯಾಳ: ಅಪರಾಧ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಂ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಪಿಎಸ್‌ಐ ವಿನೋದ ರೆಡ್ಡಿ ಹೇಳಿದರು.

ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥ ಅವರ 131 ನೇ ಜನ್ಮ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ಅಂತರ್ಜಾಲದ ದುರುಪಯೋಗ ಹೆಚ್ಚಾಗುತ್ತಿದೆ. ಜನರು ಒಂದು ಸಣ್ಣ ತಪ್ಪಿನಿಂದ ಹಣ ಹಾಗೂ ಮಹತ್ವದ ಮಾಹಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮೂಲಕ ತಿಳಿದೋ ಅಥವಾ ತಿಳಿಯದೆಯೋ ವಿವಿಧ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿದ್ದಾರೆ ಎಂದರು. ಯುಪಿಎಸ್‌ಸಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳ ಬಗ್ಗೆ ಮಹಾವಿದ್ಯಾಲಯದ ಆರ್. ರಾಮಾ ನಾಯ್ಕ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಡಾ. ಮಂಜುನಾಥ ಲಮಾಣಿ, ಡಾ. ಜಗುಬಾಯ್, ಡಾ. ಸಂಗೀತಾ ಕಟ್ಟಿಮನಿ, ಡಾ. ಪರಮಾನಂದ ದಾಸರ, ಡಾ. ಪ್ರಸಾದ ಕುಲಕರ್ಣಿ, ಡಾ. ರಾಮಾ ಗೌಡ, ದಾನೇಶ್ವರಿ ಗುಡ್ಡದ, ರಂಜಿತಾ ಎಸ್. ಅಂಬಿಪ್ಪಿ , ಡಾ. ಧನರಾಜ ಕೆಂದೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net