ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು

5-kglphoto9,
ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಕೆಎಸ್‌ಆರ್‌ಟಿ ಬಸ್‌ಬಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಗ್ರಾಮಸ್ಥರು ಸೇರಿರುವುದು.
Published on

ಕೊಳ್ಳೇಗಾಲ: ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾಮಗೆರೆ ಗ್ರಾಮದ ನಿಂಗಪ್ಪ(60)ಮೃತರು. ಗ್ರಾಮದ ಎಬಿನೇಜರ್ ಕಾಂಪ್ಲೆಕ್ಸ್ ಮುಂಭಾಗ ರಸ್ತೆಯಲ್ಲಿ ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ನಿಂಗಪ್ಪನ ತಲೆಗೆ ತೀವ್ರ ಪೆಟ್ಟಾಗಿ ಅಧಿಕ ರಕ್ತಸ್ರಾವವಾದ್ದರಿಂದ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ಈ ವೇಳೆ ಬಸ್ ತಡೆದ ಗ್ರಾಮಸ್ಥರು ಡಿಪೋ ಮ್ಯಾನೇಜರ್ ಬರುವಂತೆ ಒತ್ತಾಯಿಸಿದರು. ಗ್ರಾಮಾಂತರ ಠಾಣಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಎಸಗಿದ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net