

ವಿಜಯಪುರ : ಸ್ವಚ್ಛ ಭಾರತ ಮಿಷನ್-೨.೦ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವತಿಯಿಂದ ಅ. ೨೬ರಂದು ಸೈಕ್ಲೊಥಾನ್ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ ೬.೩೦ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಸೈಕ್ಲೊಥಾನ್ ಆರಂಭಗೊಂಡು ಗೋಲಗುಮ್ಮಟ, ಡಾ. ಬಿ.ಆರ್. ಅಂಬೇಡ್ಕರ ವೃತ್ತ, ಮಹಾತ್ಮಾ ಗಾಂಧಿ ವೃತ್ತ, ಶಿವಾಜಿ ವೃತ್ತ, ವಾಟರ್‌ಟ್ಯಾಂಕ್, ಬಿ.ಎಂ. ಪಾಟೀಲ ವೃತ್ತ, ಬಿಎಲ್‌ಡಿಇ ಕ್ಯಾಂಪಸ್, ಲಿಂಗದ ಗುಡಿ, ಸಿದ್ಧೇಶ್ವರ ದೇವಸ್ಥಾನ, ಮಹಾತ್ಮಾ ಗಾಂಧಿ ವೃತ್ತದ ಮೂಲಕ ಸಂಚರಿಸಿ ಮರಳಿ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.
ಆಸಕ್ತರು ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.