ಗೃಹಿಣಿಯೊಬ್ಬರಿಗೆ ಸುಟ್ಟ ಗಾಯ

IMG_20231006_200716
Published on

ಅರಸೀಕೆರೆ: ತಾಲೂಕಿನ ಕಣಕಟ್ಟೆ ಹೋಬಳಿ ಸೊಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಸಂಪೂರ್ಣ ಸುಟ್ಟು ಹೋಗಿದ್ದು, ಮತ್ತೊಂದು ಮನೆಗೆ ಭಾಗಶಃ ಹಾನಿಯಾಗಿದೆ. ಗ್ರಾಮದ ಚನ್ನಬಸಪ್ಪ ಪತ್ನಿ ಮೀನಾಕ್ಷಮ್ಮ ಅಡುಗೆ ಮಾಡುತ್ತಿದ್ದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ವಿಷಯ ತಿಳಿದು ಸ್ಥಳೀಯರು ಮೀನಾಕ್ಷಮ್ಮ ಅವರನ್ನು ಮನೆಯಿಂದ ಹೊರಗೆ ಕರೆತಂದಿದ್ದಾರೆ. ಎರಡೂ ಮನೆಗಳ ಅಟ್ಟದಲ್ಲಿ ಅಪಾರ ಪ್ರಮಾಣದಲ್ಲಿ ಕೊಬ್ಬರಿ ದಾಸ್ತಾನು ಮಾಡಿದ್ದರಿಂದ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ನೆರೆಯ ರಾಮಣ್ಣ ಅವರ ಮನೆಯ ಸಿಲಿಂಡರ್ ಕೂಡ ಸ್ಫೋಟಗೊಂಡಿದೆ.
ಆರಂಭದಲ್ಲಿ ಬೆಂಕಿ ನಂದಿಸಲು ಗ್ರಾಮಸ್ಥರು ಇನ್ನಿಲ್ಲದ ಸಾಹಸ ನಡೆಸಿದ್ದು, ಪ್ರಯೋಜನವಾಗಿಲ್ಲ. ಮಾಹಿತಿ ತಿಳಿದು ಅರಸೀಕೆರೆ ಹಾಗೂ ನೆರೆಯ ತಿಪಟೂರು ತಾಲೂಕಿನಿಂದ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಂಜೆವರೆಗೂ ಹರಸಾಹಸ ನಡೆಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದು, ಗ್ರಾಮಸ್ಥರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net