ಸಿಲಿಂಡರ್ ಸ್ಫೋಟ, ಮನೆ ಭಸ್ಮ

Srp_Crime 1
Published on

ಶ್ರೀರಂಗಪಟ್ಟಣ: ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಗ್ರಾಮದ ರವಿ ಎಂಬುವರ ಮನೆಯಲ್ಲಿ ಗುರುವಾರ ಅವಘಡ ಸಂಭವಿಸಿದೆ. ಸದ್ಯ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸಿಲಿಂಡರ್ ಸ್ಫೋಟದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ 2 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿತು. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಛಿದ್ರಗೊಂಡು ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣ, ಹಣ ಸುಟ್ಟು ಕರಕಲಾಗಿವೆ. ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net