

ಧಾರವಾಡ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಆ. ೨೦ರಂದು ಬೆಳಗ್ಗೆ ೧೧ ಗಂಟೆಗೆ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಹಿಂದುಳಿದ ವರ್ಗಗಳ ಎಲ್ಲ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಮತ್ತು ಆಶ್ರಯ ಶಾಲೆಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಎಂದು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಹಿಂದುಳಿದ ವರ್ಗಗಳ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಗುವುದು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಽಕಾರಿ ಸರೋಜಾ ಹಳಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಜಯಶ್ರೀ ಅಂಡೆಗಾರ, ಇತರರಿದ್ದರು.