ಆ.20 ರಂದು ಡಿ.ದೇವರಾಜ ಅರಸು ಜಯಂತಿ ಆಚರಣೆ

raichur
raichur
Published on

 ರಾಯಚೂರು ಜಿಲ್ಲಾಡಳಿತದ ಸಹಯೋಗದಲ್ಲಿ ಮಾಜಿಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿಯನ್ನು ಆ.20 ರಂದು ಆದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ.ಎಲ್ಲಾ ಸಮುದಾಯದ ಜನರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜನರಿಗೆ ಡಿ.ದೇವರಾಜು ಅರಸು ಅವರು ಅನೇಕ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದರಿಂದ ಅವರನ್ನು ಸ್ಮರಿಸುವದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇವರಾಜ ಅರಸು ಇವರ 1972 ರಿಂದ 1982 ವರೆಗೆ ಅರಸು ಯುಗವೆಂದು ಕರೆಯಲಾಗುತ್ತಿದೆ.

ಜಯಂತಿ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರಗೆ ಭಾವಚಿತ್ರ ಮೆರವಣಿಗೆ ನಡೆಯುತ್ತದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಸಮುದಾಯದ ಜನರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹನುಮಂತಪ್ಪ ಯಾದವ, ವಿಜಯ ಭಾಸ್ಕರ ಇಟಗಿ, ಜಂಬಣ್ಣ ಯಕ್ಷಾಸಪುರು, ತಾಯಣ್ಣಗೌಡ, ದಾನಪ್ಪ ಯಾದವ, ಪಿ.ಸುರೇಖಾ, ಪಾಗುಂಟಪ್ಪ , ಈರಪ್ಪಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net