ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸ್ ೧೦೮ನೇ ಜನ್ಮ ದಿನಾಚರಣೆ

WhatsApp Image 2023-08-20 at 11.39.05
Published on

ಪುತ್ತೂರು: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ಹಿಂದುಇದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸ್ ಅವರ ೧೦೮ನೇ ಜನ್ಮ ದಿನಾಚರಣೆಯ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಿದ್ದರು.

ಎಸ್. ಎಸ್. ಎಲ್. ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಾದ ಮೇಘನಾ, ನಂದೀಶ್, ನಿಹಾಲ್, ಸಚಿತ್ರ ಬನ್ನೂರು ಅವರನ್ನು ಸನ್ಮಾನಿಸಲಾಯಿತು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಪ್ರಾಂಶುಪಾಲ ಸೀತಾರಾಮ ಕೇವಳ, ಪುತ್ತೂರು ತಹಶೀಲ್ದಾರ್ ಶಿವಶಂಕರ್ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾಧಿಕಾರಿ ರಾಜಗೋಪಾಲ್ ಸ್ವಾಗತಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net