ಡಿ.ದೇವರಾಜ ಅರಸು ಬಡತನ ನಿರ್ಮೂಲನೆ ಮೊದಲ ಆದ್ಯತೆ

HB Halli Devaraj Arasu Jayanti
ಹಗರಿಬೊಮ್ಮನಹಳ್ಳಿ ತಾಪಂ ಕಚೇರಿಯಲ್ಲಿ ಡಿ.ದೇವರಾಜ ಅರಸು ಜನ್ಮದಿನ ಆಚರಿಸಲಾಯಿತು.
Published on

ಹಗರಿಬೊಮ್ಮನಹಳ್ಳಿ: ಡಿ.ದೇವರಾಜ ಅರಸು ಸಿಎಂ ಆಗಿದ್ದಾಗ 1973ರಲ್ಲಿ ಮೈಸೂರ ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕರಣ ಮಾಡಿದರು ಎಂದು ಗಂಗಾವತಿ ಭೀಮಪ್ಪನರ ಸರ್ಕಾರಿ ಪಪೂ ಕಾಲೇಜು ಪ್ರಾಚಾರ್ಯ ಡಾ.ಎಂ.ಕೆ.ದುರುಗಪ್ಪ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ತಾಲೂಕಾಡಳಿತ ಏರ್ಪಡಿಸಿದ್ದ ಮಾಜಿ ಸಿಎಂ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾಗಿದ್ದ ಅರಸು ಅವರು ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ. ಬಡತನ ನಿರ್ಮೂಲನೆ ಅವರ ಮೊದಲ ಆದ್ಯತೆ ಆಗಿತ್ತು.

ಅವರ ಯೋಜನೆಗಳಿಂದಾಗಿ ಕೂಲಿ ಮಾಡುವವರು ಭೂ ಮಾಲೀಕರಾದರು, ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆಯಾಯಿತು ಎಂದರು. ಡಾ.ಅಂಬೇಡ್ಕರ ಸಂಘದ ತಾಲೂಕು ಅಧ್ಯಕ್ಷ ಎಚ್.ದೊಡ್ಡಬಸಪ್ಪ, ತಹಸೀಲ್ದಾರ್ ಚಂದ್ರಶೇಖರ್ ಎಸ್.ಗಾಳಿ, ತಾಪಂ ಇಒ ಜಿ.ಪರಮೇಶ್ವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ್, ಮಹಾಂತೇಶ್, ಗೋಪಾಲಕೃಷ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net