ಶ್ರಮಿಕ ವರ್ಗಗಳ ಕಣ್ಮಣಿ ಡಿ.ದೇವರಾಜ ಅರಸು: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿತಿಬ್ಬೇಗೌಡ ಬಣ್ಣನೆ

3
Published on

ಮೈಸೂರು: ಉಳುವವನೇ ಭೂಮಿ ಒಡೆಯ ಎನ್ನುವ ಕಾಯ್ದೆ ಜಾರಿಗೊಳಿಸುವ ಮೂಲಕ ಶ್ರಮಿಕ ವರ್ಗಕ್ಕೆ ಡಿ.ದೇವರಾಜ ಅರಸು ಅವರು ಕಣ್ಮಣಿ ಅಗಿದ್ದಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟರು.
ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್‌ನಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು, ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರು ಸ್ಥಳೀಯ ಸಂಸ್ಥೆಗಳಲ್ಲಿಯೂ ರಾಜಕೀಯ ಮೀಸಲಾತಿ ಜಾರಿಗೊಳಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳಿಸಿದರು. ಅವರ ಅವಧಿಯಲ್ಲಿ ಭಾರತ ಅನೇಕ ಅಭಿವೃದ್ಧಿ ಯೋಜನೆಗಳನ್ನು ಹೊಂದಿ ಸೂಪರ್ ಪವರ್ ರಾಷ್ಟ್ರವಾಗುತ್ತ ಮುನ್ನಡೆದಿತ್ತು. ವಿದೇಶಗಳು ಭಾರತದತ್ತ ಸ್ನೇಹ ಹಸ್ತ ಚಾಚುವಂತೆ ಮಾಡಿದ್ದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದರು.
ಮಾಜಿ ಶಾಸಕ ಡಾ. ಭಾರತಿಶಂಕರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್, ಮಾಜಿ ಮೇಯರ್‌ಗಳಾದ ಪುಷ್ಪಲತಾ ಚಿಕ್ಕಣ್ಣ, ಮೋದಾಮಣಿ, ಮುಖಂಡರಾದ ಸುನಂದಕುಮಾರ್, ನಾಗೇಶ್, ಗಿರೀಶ್ ಉಪ್ಪಾರ್, ಶಿವರಾಂ, ಮೊಗಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net