

ಮಂಡ್ಯ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತ್ಯುತ್ಸವದ ಅಂಗವಾಗಿ ಸೆ.20 ಬೆಳಗ್ಗೆ 11.30 ಗಂಟೆಗೆ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 197 ಜಾತಿಗಳ ಸಾಧಕರನ್ನು ಗುರುತಿಸಿ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಹೇಳಿದರು.
ಅಂದು ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಗಂಗೆ ಮಹಾಲಕ್ಷ್ಮೀ ಮಹಾಸಂಸ್ಥಾನ ಮಠದ ಜ್ಞಾನಾನಂದಪುರಿ ಸ್ವಾಮಿ ಸಾನಿಧ್ಯ ವಹಿಸುವರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್‌ಸಿಂಗ್ ಉದ್ಘಾಟಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಯತೀಂದ್ರ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅದ್ಯಕ್ಷ ಕೀರ್ತಿ ಗಣೇಶ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಾಜಿ ಎಂಎಲ್‌ಸಿ ಎಂ.ಡಿ.ಲಕ್ಷ್ಮೀನಾರಾಯಣ ಆಗಮಿಸುವರು ಎಂದರು.
ಮುಖಂಡರಾದ ಕೃಷ್ಣಕುಮಾರ್, ಸೋಮೇಶ್, ಕಾಂತರಾಜ್, ನಾಗರಾಜ್ ಇದ್ದರು.