ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸದಸ್ಯತನ ನೋಂದಣಿಯ 2ನೇ ಹಂತದ ಅಭಿಯಾನ

mng-2oct-bjp member
Published on



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸದಸ್ಯತನ ನೋಂದಣಿಯ ಎರಡನೇ ಹಂತದ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ, ಸಂಸದ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಚಾಲನೆ ನೀಡಿದರು .
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಭಿಯಾನದ ರೂಪುರೇಷೆಯನ್ನು ವಿವರಿಸಿದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂಜಾ ಪೈ ,ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ , ಪ್ರಮುಖರಾದ ನಿತಿನ್‌ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ರಾಜಗೋಪಾಲ್ ರೈ, ಉಪ ಮೇಯರ್ ಭಾನುಮತಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್ ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ , ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ ಹಾಗೂ ಜಿಲ್ಲಾ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net