ದ.ಕ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

sports
Published on


ಮಂಗಳೂರು: ಸುದ್ದಿಯ ಹಿಂದೆ ಹೋಗುವ ಪತ್ರಕರ್ತರ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಡಿಐಜಿ ಡಾ.ಚಂದ್ರ ಗುಪ್ತ ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್
ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಭಾನುವಾರ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.


ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಸಂಘಟನೆ ಕ್ರೀಡಾಕೂಟ ಆಯೋಜಿಸುತ್ತಿರುವುದು ಶ್ಲಾಘನೀಯ. ಎಲ್ಲ ಪತ್ರಕರ್ತರು ಸ್ಪರ್ಧಾ ಮನೋಭಾವದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಕ್ರಿಕೆಟ್ ಪಂದ್ಯಾಟವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಿದರು. ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸುದ್ದಿ ಮನೆಯ ಒತ್ತಡದ ನಡುವೆ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತ ಋತ್ವಿಕ್ ಅಲೆವೂರಾಯ ಮುಖ್ಯ ಅತಿಥಿಗಳಾಗಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮ ಕೃಷ್ಣ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯ ಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸುರೇಶ್ ಡಿ.ಪಳ್ಳಿ, ಶ್ರವಣ್ ಕುಮಾರ್ ನಾಳ, ಸುಖ್‌ಪಾಲ್ ಪೊಳಲಿ ಉಪಸ್ಥಿತರಿದ್ದರು.


ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.

ಕ್ರಿಕೆಟ್‌ನಲ್ಲಿ ವಿಜಯವಾಣಿೆ ರನ್ನರ್ಸ್
ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೈನಲ್‌ಗೇರಿದ ವಿಜಯವಾಣಿ ತಂಡ ಮತ್ತು ವಾರ್ತಾಭಾರತಿ ತಂಡಗಳ ನಡುವೆ ರೋಚಕ ಪಂದ್ಯ ನಡೆದು ವಾರ್ತಾಭಾರತಿ ವಿನ್ನರ್ಸ್, ವಿಜಯವಾಣಿ ರನ್ನರ್ಸ್ ಆಗಿ ಹೊರ ಹೊಮ್ಮಿತು. ಒಟ್ಟು 8 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net