ಐಎಎಸ್​ ಅಧಿಕಾರಿ ದಿವಂಗತ ಡಿ.ಕೆ. ರವಿಯ ತಂದೆಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ

DKR
Published on

ಕುಣಿಗಲ್: ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ತಂದೆ ಕರಿಯಪ್ಪ (75) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಸ್ವಗ್ರಾಮ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಮೃತಪಟ್ಟರು.

ತಾಲೂಕಿನ ಹುಲಿಯೂರು ದುರ್ಗ ಹೋಬಳಿ ದೊಡ್ಡಕೊಪ್ಪಲು ಗ್ರಾಮದಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದ ಕರಿಯಪ್ಪ ಅವರನ್ನು ಕೂಡಲೇ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅವರು ಕೊನೆಯುಸಿರೆಳೆದಿದ್ದು, ಪತ್ನಿ ಗೌರಮ್ಮ ಅವರನ್ನು ಅಗಲಿದರು. ಮಂಗಳವಾರ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಕರಿಯಪ್ಪ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಲಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net