ದ.ಕನ್ನಡ ಗಣರಾಜ್ಯೋತ್ಸವ ಆಚರಣೆ

IMG-20220126-WA0012
Published on

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net