ಇಂದು ಡಿ.ಕೆ ಶಿವಕುಮಾರ್ ಉಡುಪಿಗೆ, ಕಮಲಶಿಲೆ, ಕೊಲ್ಲೂರು ದೇವಳ ಭೇಟಿ

DKS 4 may 20
Published on

ಉಡುಪಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು, ರಾತ್ರಿ 8ಕ್ಕೆ ಕಮಲಶಿಲೆ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಬಳಿಕ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಹೂಡಲಿದ್ದು, ಭಾನುವಾರ ಬೆಳಗ್ಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿಯಾಗಿ ಭಾನುವಾರ ಬೆಳಗ್ಗೆ 11ಕ್ಕೆ ಮಿಶನ್ ಕಾಂಪೌಂಡ್‌ನ ಮಿಶನ್ ಬಾಸೆಲ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net