ಮೆಡಿಕಲ್ ಕಾಲೇಜಿಗೆ ಶಾಸಕ ಡಿ.ಕೆ. ಶಿವಕುಮಾರ್ ಪಟ್ಟು

D.K.Shivakumar 01
Published on

ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಅನ್ನು ಬೇರೆಡೆ ವರ್ಗಾವಣೆ ಮಾಡಿರುವ ಆದೇಶಕ್ಕೆ ತಡೆ ನೀಡಬೇಕೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಶಾಸಕ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಸ್ಥಳೀಯ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ವಿಧಾಸೌಧದಲ್ಲಿ ಭೇಟಿ ಮಾಡಿದ ಶಿವಕುಮಾರ್, ಮೆಡಿಕಲ್ ಕಾಲೇಜು ಸೇರಿ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ರ್ಚಚಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕುಣಿಗಲ್ ಶಾಸಕ ಡಾ. ರಂಗನಾಥ್, ವಿಧಾನಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಚ್.ಎಂ. ರೇವಣ್ಣ, ಎಸ್. ರವಿ ಇದ್ದರು.

ಅಧಿಕಾರಕ್ಕೆ ಬರುವ ಮುನ್ನ ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದಿರಿ. ಆದರೆ, ನನ್ನ ಕ್ಷೇತ್ರಕ್ಕೆ ಮಂಜೂರಾಗಿ ಭೂಮಿಪೂಜೆ ಹಂತದಲ್ಲಿದ್ದ ಸರ್ಕಾರಿ ಮೆಡಿಕಲ್ ಕಾಲೇಜನ್ನು ಬೇರೆಡೆ ವರ್ಗಾಯಿಸಿದ್ದೀರಿ. ಈ ಮೂಲಕ ಹಗೆತನದ ರಾಜಕಾರಣ ಮಾಡಿದ್ದೀರಿ ಎಂದು ಸಿಎಂಗೆ ನೀಡಿರುವ ಪತ್ರದಲ್ಲಿ ಶಿವಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಮನವಿ ಸ್ವೀಕರಿಸಿದ ಸಿಎಂ, ಪರಿಶೀಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net